ಅಭಿಪ್ರಾಯ / ಸಲಹೆಗಳು
ಕುಂದುಕೊರತೆ

ನಮ್ಮ ಬಗ್ಗೆ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಯೋಗಗಳು ಕಾಯಿದೆ 2005 (2006ರ ಸಂಖ್ಯೆ 4) ರಡಿಯಲ್ಲಿ ಸ್ವತಂತ್ರ ಶಾಸನಬದ್ಧ ಅಂಗಸಂಸ್ಥೆಯಾಗಿರುತ್ತದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ (UNCRC) ಭಾರತ ಸರ್ಕಾರವು 11 ಡಿಸೆಂಬರ್ 1992ರಲ್ಲಿ ಸ್ಪಷ್ಠಪಡಿಸಿರುವಂತೆ ಮಕ್ಕಳ ಹಕ್ಕುಗಳನ್ನು ರಕ್ಷಿಸಿ ಬೆಂಬಲ ನೀಡಲೆಂದೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವನ್ನು ರಚಿಸಲಾಗಿದೆ.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವನ್ನು 2009ರ ಜುಲೈನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ರಚಿಸಿತು. 2009 ರಿಂದ ಅಧ್ಯಕ್ಷರು ಮತ್ತು ಆರು ಜನ ಸದಸ್ಯರನ್ನೊಳಗೊಂಡ ಸಮಿತಿಯು ಕಾರ್ಯ ನಿರ್ವಹಿಸುತ್ತಿದೆ.ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಆಯೋಗಗಳು ಕಾಯಿದೆಯ ಸೆಕ್ಷನ್ 13 ರನ್ವಯ ದೂರುಗಳನ್ನು ವಿಚಾರಣೆಗೊಳಪಡಿಸುವ ಅಧಿಕಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಹೊಂದಿದೆ, ಮತ್ತು ಸೆಕ್ಷನ್ 14 ರಡಿಯಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯದಂತೆ ಕಾರ್ಯನಿರ್ವಹಿಸುವ ಅಧಿಕಾರವನ್ನು ಹೊಂದಿರುತ್ತದೆ. ಮಕ್ಕಳ ಹಕ್ಕುಗಳು ಉಲ್ಲಂಘನೆಯಾದ ಪ್ರಕರಣಗಳನ್ನು ಆಯೋಗವು ದೂರುಗಳನ್ನು ಪಡೆದು ಅಥವಾ ತಾನಾಗಿಯೇ ಸ್ವ-ಪ್ರೇರಣೆಯಿಂದ (ಸುವೋ-ಮೋಟೋ) ದೂರು ದಾಖಲಿಸಿಕೊಂಡು ಕ್ರಮಗಳನ್ನು ಕೈಗೊಳ್ಳಬಹುದಾಗಿರುತ್ತದೆ.

ಇತ್ತೀಚಿನ ನವೀಕರಣ​ : 22-10-2020 01:57 PM ಅನುಮೋದಕರು: kscpcrapprover


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಹಕ್ಕುಸ್ವಾಮ್ಯ ನೀತಿ

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ