ಅಭಿಪ್ರಾಯ / ಸಲಹೆಗಳು

ಆಯೋಗದ ಮೇಲ್ವಿಚಾರಣೆಯ ಕಾಯಿದೆಗಳು

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮೇಲುಸ್ತುವಾರಿ ನಿರ್ವಹಿಸುತ್ತಿರುವ ಕಾಯ್ದೆಗಳು

  • ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ 2009: ಎಲ್ಲ ಮಕ್ಕಳು ಉಚಿತ ಕಡ್ಡಾಯ ಮತ್ತು ಸಮಾನ ಶಿಕ್ಷಣವನ್ನು ಪಡೆಯುವ ಹಕ್ಕನ್ನು ಒಂದು ಮೂಲ ಭೂತ ಹಕ್ಕನ್ನಾಗಿ ಸರ್ವೊಚ್ಚ ನ್ಯಾಯಾಲಯವು 1993ರಲ್ಲಿ ನೀಡಿದ ಐತಿಹಾಸಿಕ ತೀರ್ಪನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ ಈ ಕಾಯಿದೆ ಅತ್ಯಂತ ಮಹತ್ವದ್ದಾಗಿದ್ದು, 6ರಿಂದ 14 ವರ್ಷದೊಳಗಿನ ಪ್ರತಿಯೊಂದು ಮಗುವು ತನ್ನ ಹತ್ತಿರದ ಶಾಲೆಯಲ್ಲಿ ತನ್ನ ಪ್ರಾಥಮಿಕ ಶಿಕ್ಷಣವನ್ನು ಪೂರ್ತಿ ಮಾಡುವವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕನ್ನು ಹೊಂದಿದೆ. ಈ ಕಾಯಿದೆಯ ಕಲಂ 31ರ ಹಾಗೂ ನಿಯಮಗಳು 2012ರ ಸೆಕ್ಷನ್ (21)ರನ್ವಯ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಉಚಿತ ಮತ್ತು  ಕಡ್ಡಾಯ ಶಿಕ್ಷಣ ಕಾಯಿದೆ ಅಡಿಯಲ್ಲಿ ಬರುವ ದೂರುಗಳನ್ನು ತನಿಖೆ, ಮೇಲ್ವಿಚಾರಣೆÀ ನಡೆಸುವ ಹಾಗೂ ಸೂಕ್ತ ಕ್ರಮ ಕೈಗೊಳ್ಳುವ ಅಧಿಕಾರವನ್ನು ಹೊಂದಿರುತ್ತದೆ.
  •  ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ (ಪೋಕ್ಸೋ) ಕಾಯಿದೆಯ ಜಾರಿ ಕುರಿತು ಉಸ್ತುವಾರಿ - ಸೆಕ್ಷನ್ 44 ಕಾಯಿದೆಯ ಜಾರಿ ಉಸ್ತುವಾರಿಯ ಬೃಹತ್ ಜವಾಬ್ದಾರಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳಿಗೆ ವಹಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳು ಕಾಯಿದೆ 2005ರ ಸೆಕ್ಷನ್ 13ರಲ್ಲಿ ವಹಿಸಲಾಗಿರುವ ಜವಾಬ್ದಾರಿಗಳಡಿ ಇದನ್ನು ಗುರುತಿಸಲಾಗಿದೆ.
  • ಬಾಲನ್ಯಾಯ (ಆರೈಕೆ ಮತ್ತು ರಕ್ಷಣೆ) ಕಾಯಿದೆಯ ಜಾರಿ ಕುರಿತು ಉಸ್ತುವಾರಿ-ಬಾಲನ್ಯಾಯ ಕಾಯ್ದೆ 2015 ರ ಸೆಕ್ಷನ್ 109 ರ ಪ್ರಕಾರ ಸದರಿ ಕಾಯ್ದೆಯ ಬೃಹತ್ ಜವಾಬ್ದಾರಿಯನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಗಳಿಗೆ ವಹಿಸಲಾಗಿದೆ.
  • ಆಯೋಗವು ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ನ್ಯಾಯಾಂಗ ಇಲಾಖೆ, ಲೀಗಲ್ ಸರ್ವಿಸ್ ಅಥಾರಿಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಕಾರ್ಮಿಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲ ನ್ಯಾಯ ಮಂಡಳಿಗಳ ಜೊತೆಗೆ ಪರಸ್ಪರ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿದೆ.

ಇತ್ತೀಚಿನ ನವೀಕರಣ​ : 22-10-2020 01:57 PM ಅನುಮೋದಕರು: kscpcrapprover


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080