ಅಭಿಪ್ರಾಯ / ಸಲಹೆಗಳು

ಮಕ್ಕಳ ಹಕ್ಕುಗಳ ಬಗ್ಗೆ ತಿಳಿಯೋಣ

ಮಕ್ಕಳ ಹಕ್ಕುಗಳ ಬಗ್ಗೆ ತಿಳಿಯೋಣ:

ನವೆಂಬರ್ 20 1989ರಂದು ವಿಶ್ವಸಂಸ್ಥೆಯು ಮುಂದಿಟ್ಟ ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ನು (UNCRC) ಜಗತ್ತಿನ ಬಹುತೇಕ ರಾಷ್ಟ್ರಗಳು ಒಪ್ಪಿಕೊಂಡಿರುತ್ತವೆ. ಭಾರತ ಸರ್ಕಾರವು 11 ಡಿಸೆಂಬರ್ 1992ರಲ್ಲಿ ಈ ಒಡಂಬಡಿಕೆಗೆ ಸಹಿ ಮಾಡಿತ್ತು. ಮಗುವೆಂದರೆ, 18 ವರ್ಷದೊಳಗಿನವರು ಎಂದು ವ್ಯಾಖ್ಯಾನಿಸಲಾಗಿರುತ್ತದೆ. ಮಕ್ಕಳ ಹಕ್ಕುಗಳ ಒಡಂಬಡಿಕೆ ಸಮಾನ ಪ್ರಾಮುಖ್ಯತೆಯುಳ್ಳ, ಪರಸ್ಪರ ಸಂಬಂಧಿತ ಮತ್ತು ಪರಸ್ಪರ ಅವಲಂಬಿತವಾಗಿರುವ ನಾಲ್ಕು ವಿಧದ ಹಕ್ಕುಗಳಿಗೆ ಪ್ರಾಮುಖ್ಯತೆ ನೀಡುತ್ತದೆ.

1. ಬದುಕುವ ಹಕ್ಕು

2. ರಕ್ಷಣೆಯ ಹಕ್ಕು

3. ವಿಕಾಸ ಹೊಂದುವ ಹಕ್ಕು

4. ಭಾಗವಹಿಸುವ ಹಕ್ಕು

ದೇಶದ ಒಳಿತಿಗಾಗಿ ಮತ್ತು ಅಭಿವೃದ್ಧಿಗಾಗಿ ಮಕ್ಕಳನ್ನು ರಕ್ಷಿಸುವುದು ಹಾಗೂ ಅವರ ಅವಶ್ಯಕತೆಗಳನ್ನು ಪೂರೈಸಿ ಅಭಿವೃದ್ಧಿಗೊಳಿಸುವುದು ಪ್ರತಿಯೊಬ್ಬರ ನಾಗರೀಕರ ಮತ್ತು ಸರ್ಕಾರದ ಜವಾಬ್ದಾರಿಯಾಗಿರುತ್ತದೆ. ಮಕ್ಕಳ ರಕ್ಷಣೆಗಾಗಿ ಪ್ರಮುಖ ಕಾಯಿದೆಗಳು ಈ ಕೆಳಕಂಡಂತೆ ಇರುತ್ತವೆ.

  • ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯಿದೆ-(2006, ತಿದ್ದುಪಡಿ 2015)
  • ಬಾಲ್ಯವಿವಾಹ ನಿಷೇಧ ಕಾಯ್ದೆ-2006
  • ಮಕ್ಕಳ ಮೇಲಿನ ಲೈಂಗಿಕ ತಡೆ ಅಪರಾಧ ಕಾಯ್ದೆ-2012
  • ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009
  • ಬಾಲಕಾರ್ಮಿಕ ನಿಷೇಧ ಕಾಯಿದೆ-(1986, ತಿದ್ದುಪಡಿ 2016)

ಇತ್ತೀಚಿನ ನವೀಕರಣ​ : 08-04-2022 01:01 PM ಅನುಮೋದಕರು: kscpcrapprover


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080